Sahitya: K S Nissar Ahmed
Song link: Click Here
Jogada siri belakinalli, tungeya tene balukinalli,
Sahyadriya lohadadira uttungada nilukinali,
Nityaharidwarna vanada tega ghanda tarugalalli
Nityotsava tayi nityotsava
Ninage nityotsava tayi nityotsava ||
Etihasada himadallina simhasana maleyalli,
Gata sahasa saarutiruva shasanagala salinalli,
Olegariya sirigalalli, degulagala bhittigalali
Nityotsava tayi nityotsava
Ninage nityotsava tayi nityotsava ||
Halavennada hirime ye, kulavennada garime ye
Sadvikasa sheela nudiya lokavruta seeme ye
Ee vatsara nirmatsara manadudara mahime ye
Nityotsava tayi nityotsava
Ninage nityotsava tayi nityotsava ||
ಭಾವಗೀತೆ
ಜೋಗದ ಸಿರಿ ಬೆಳಕಿನಲ್ಲಿ, ತುಂಗೆಯ ತೆನೆ ಬಳುಕಿನಲ್ಲಿ,
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ,
ನಿತ್ಯ ಹರಿದ್ವರ್ಣ ವನದ ತೇಗ ಗಂಧ ತರುಗಳಲ್ಲಿ
ನಿತ್ಯೋತ್ಸವ ತಾಯಿ ನಿತ್ಯೋತ್ಸವ
ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ ।।ಪ ।।
ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ,
ಗತ ಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ
ಓಲೆಗರಿಯ ಸಿರಿಗಳಲ್ಲಿ, ದೇಗುಲಗಳ ಭಿತ್ತಿಗಳಲಿ
ನಿತ್ಯೋತ್ಸವ ತಾಯಿ ನಿತ್ಯೋತ್ಸವ
ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ ।।೧।।
ಹಲವೆನ್ನದ ಹಿರಿಮೆಯೆ ಕುಲವೆನ್ನದ ಗರಿಮೆಯೆ,
ಸದ್ವಿಕಾಸ ಶೀಲ ನುಡಿಯ ಲೋಕಾವೃತ ಸೀಮೆಯೆ,
ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ
ನಿತ್ಯೋತ್ಸವ ತಾಯಿ ನಿತ್ಯೋತ್ಸವ
ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ .. ।।೨।।

No comments:
Post a Comment